ಸೋಲಿನ ಹೊಣೆ ಹೊತ್ತ ಡಿಕೆಶಿ

November 11, 2020

ಬೆಂಗಳೂರು ನ.11 : ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪು ತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು ಬೇರೆಯವರ ಮೇಲೆ ಹಾಕುವುದಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಂದಿದೆ. ಮತದಾರರು ಕೊಟ್ಟ ತೀರ್ಪನ್ನು ನಾವು ಬಹಳ ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ ಎಂದರು.
ಕಾಂಗ್ರೆಸ್ ಪಕ್ಷ ಮತದಾರರ ತೀರ್ಪು ಪ್ರಶ್ನೆ ಮಾಡುವುದಿಲ್ಲ. ಈ ಫಲಿತಾಂಶ ಹೇಗಾಯಿತು, ಯಾಕಾಯಿತು ಎಂಬುದನ್ನು ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಕುಳಿತ ಚರ್ಚೆ ಮಾಡುತ್ತೇವೆ. ಎಲ್ಲಿ ಏನೇನು ಸರಿ ಮಾಡಿಕೊಳ್ಳಬೇಕೋ ಅದನ್ನು ಮಾಡುತ್ತೇವೆ ಎಂದು ಡಿಕೆಶಿ ತಿಳಿಸಿದರು.

error: Content is protected !!