ಪಾಕ್‍ಗೆ ಖಡಕ್ ಸಂದೇಶ ರವಾನಿಸಿದ ಮೋದಿ

11/11/2020

ನವದೆಹಲಿ ನ.11 : ಶಾಂಘೈ ಸಹಕಾರ ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಪೂರ್ವ ಲಡಾಖ್ ನಲ್ಲಿ ಸಿನೋ- ಭಾರತ ಗಡಿ ವಿವಾದ, ಭಾರತ ವಿರುದ್ಧ ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಕಾಶ್ಮೀರ ವಿವಾದವನ್ನು ಅಂತಾರಾಷ್ಟ್ರೀಯ ವಿಚಾರವಾಗಿಸುವ ಪಾಕ್ ಪ್ರಯತ್ನದ ಹಿನ್ನೆಲೆಯಲ್ಲಿ ಎಂಟು ಸದಸ್ಯರ ಶಾಂಘೈ ಸಹಕಾರ ಸಂಘಟನೆಯ ವರ್ಚುಯಲ್ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ-ಜಿನ್ ಪಿಂಗ್ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಸಮ್ಮುಖದಲ್ಲಿಯೇ ನರೇಂದ್ರ ಮೋದಿ ಈ ರೀತಿಯ ಸಂದೇಶ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನೇತೃತ್ವದಲ್ಲಿ ನಡೆದ ಶೃಂಗಸಭೆಯಲ್ಲಿ ಇತರ ರಾಷ್ಟ್ರಗಳ ಮುಖಂಡರು ಪಾಲ್ಗೊಂಡಿದ್ದರು.