ಮತಾಂತರ ನಿಷೇಧ ಕಾನೂನು ಜಾರಿಗೆ ವಿಹೆಚ್‍ಪಿ ಮತ್ತು ಬಜರಂಗದಳ ಒತ್ತಾಯ

November 12, 2020

ಮಡಿಕೇರಿ ನ.11 : ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಬೇಕು ಮತ್ತು ಮತಾಂತರ ನಿಷೇಧ ಕಾನೂನನ್ನು ತಕ್ಷಣ ಜಾರಿಗೆ ತರಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ ಕೊಡಗು ಜಿಲ್ಲಾ ಶಾಖೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ.
ಬಜರಂಗದಳದ ಜಿಲ್ಲಾ ಸಂಯೋಜಕ ಕೆ.ಹೆಚ್.ಚೇತನ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಪ್ರಮುಖರು ದೇಶಾದ್ಯಂತ “ಲವ್ ಜಿಹಾದ್” ಪ್ರಕರಣಗಳು ಹೆಚ್ಚಾಗುತ್ತಿದ್ದು, ಮುಗ್ಧ ಅಮಾಯಕ ಹಿಂದೂ ಯುವತಿಯರು ಈ ಷಡ್ಯಂತ್ರಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಲವ್ ಜಿಹಾದ್ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದ್ದು, ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಡಿ.ಹೆಚ್.ಮೇದಪ್ಪ, ತಾಲ್ಲೂಕು ಅಧ್ಯಕ್ಷ ಸುರೇಶ್ ಮುತ್ತಪ್ಪ, ನಗರ ಕಾರ್ಯದರ್ಶಿ ಪಿ.ಎಂ.ರವಿ, ಬಜರಂಗದಳದ ಜಿಲ್ಲಾ ವಿದ್ಯಾರ್ಥಿ ಪ್ರಮುಖ ವಿನಯ್, ತಾಲ್ಲೂಕು ಸಂಯೋಜಕ ಮನು ರೈ, ನಗರ ಸಹ ಸಂಯೋಜಕ ಚರಣ್, ದುರ್ಗೇಶ್, ಪಿ.ಎ.ರವಿ, ಬಿಜೆಪಿ ನಗರ ಸಾಮಾಜಿಕ ಜಾಲತಾಣದ ಸಂಚಾಲಕ ಪಾಂಡೀರ ಪೂಣಚ್ಚ, ನಗರ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಉಪಾಧ್ಯಕ್ಷ ವಿಘ್ನೇಶ್ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.

error: Content is protected !!