ಮಡಿಕೇರಿಯಲ್ಲಿ ಸಹಾಯಕ ತನಿಖಾಧಿಕಾರಿಗಳ ಕಾರ್ಯಾಗಾರ : ತನಿಖೆ ಸಂದರ್ಭ ನಿಯಮ ಪಾಲನೆ ಅಗತ್ಯ : ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅಭಿಮತ

12/11/2020

ಮಡಿಕೇರಿ ನ.12 : ಅಪರಾಧ ಪ್ರಕರಣಗಳ ತನಿಖೆ ಸಂದರ್ಭ ನಿಯಮ ಪಾಲನೆ ಅತ್ಯಗತ್ಯವೆಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪೆÇಲೀಸ್ ವತಿಯಿಂದ ಇಂದು ನಗರದ ಕಾವೇರಿ ಹಾಲ್ ನಲ್ಲಿ ಸಹಾಯಕ ತನಿಖಾಧಿಕಾರಿಗಳಿಗೆ ತನಿಖಾ ಗುಣಮಟ್ಟವನ್ನು ಸುಧಾರಿಸುವ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸ ಲಾಗಿತ್ತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶರು ಅಪರಾಧ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಮತ್ತು ಸಹಾಯಕ ತನಿಖಾಧಿಕಾರಿಗಳು ತನಿಖೆಯನ್ನು ನಡೆಸುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ವಿಧಿವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ ಅವರು ಅಪರಾಧದ ಬಗ್ಗೆ ಸೂಕ್ತ ಮಾಹಿತಿಗಳನ್ನು ಕಲೆ ಹಾಕುವ ಮೂಲಕ ತನಿಖಾ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದರು. ತನಿಖಾ ವಿಧಾನಗಳ ಕುರಿತು ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ನೂರುನ್ನಿಸ ಅವರು ಮಾತನಾಡಿ ಅಪ್ರಾಪ್ತ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸುವ ಸಂದರ್ಭ ಅನುಸರಿಸಬೇಕಾದ ಕ್ರಮಗಳು ಮತ್ತು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಬಗ್ಗೆ ವಿವರಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲೆಯ ಮೂರು ಉಪ ವಿಭಾಗಗಳ ಪೆÇಲೀಸ್ ಉಪಾಧೀಕ್ಷಕರು, ಜಿಲ್ಲೆಯ ಎಲ್ಲಾ ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು ಹಾಗೂ ಸಹಾಯಕ ತನಿಖಾಧಿಕಾರಿಗಳು ಹಾಜರಿದ್ದರು.
ಸಭಾ ಕಾರ್ಯಕ್ರಮವನ್ನು ಡಿ.ಸಿ.ಐ.ಬಿ. ಘಟಕದ ಪೆÇಲೀಸ್ ನಿರೀಕ್ಷಕ ಎಸ್.ಎನ್.ಜಯರಾಮ್ ನಿರೂಪಿಸಿದರು. ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಬಿ.ಪಿ.ಜಯಕುಮಾರ್, ಸ್ವಾಗತಿಸಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‍ಪಿ ಸಿ.ಟಿ.ಜಯಕುಮಾರ್ ವಂದಿಸಿದರು.