ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 145

November 12, 2020

ಮಡಿಕೇರಿ ನ. 12 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 8 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 4 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5122ಆಗಿದ್ದು, 4907 ಮಂದಿ ಗುಣಮುಖರಾಗಿದ್ದಾರೆ. 145
ಸಕ್ರಿಯ ಪ್ರಕರಣಗಳಿದ್ದು, 70 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 119 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.

error: Content is protected !!