ನಿತೀಶ್ ಕುಮಾರ್‍ಗೆ ಮತ್ತೆ ಸಿಎಂ ಪಟ್ಟ

12/11/2020

ಪಾಟ್ನಾ ನ.12 : ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಸತತ ಆರನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟ ಸರ್ಕಾರ ರಚಿಸಲು ಅಗತ್ಯವಾಗಿರುವ “ಮ್ಯಾಜಿಕ್ ಸಂಖ್ಯೆ” ದಾಟಿದೆ. ಇದರೊಂದಿಗೆ ಎನ್ಡಿಎ ಮೈತ್ರಿಕೂಟದ ಜೆಡಿ(ಯು) ನಾಯಕ ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೀಪಾವಳಿ ನಂತರ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ, ಜೆಡಿ(ಯು) ನಾಯಕ ಕೆ.ಸಿ.ತ್ಯಾಗಿ ತಿಳಿಸಿದ್ದಾರೆ.