ಲಸಿಕೆ ಸ್ಪುಟ್ನಿಕ್ ವಿನಿಂದ ಜನರನ್ನು ರಕ್ಷಿಸಬಹುದು

12/11/2020

ಮಾಸ್ಕೋ ನ.12 : ಮೊದಲ ಮಧ್ಯಂತರ ವಿಶ್ಲೇಷಣೆಯ ಪ್ರಕಾರವಾಗಿ ತಾನು ಅಭಿವೃದ್ಧಿಪಡಿಸಿದ ಲಸಿಕೆ ಸ್ಪುಟ್ನಿಕ್ ವಿ ಕೋವಿಡ್ ನಿಂದ ಜನರನ್ನು ರಕ್ಷಿಸುವಲ್ಲಿ ಶೇಕಡಾ 92 ರಷ್ಟು ಪರಿಣಾಮಕಾರಿ ಎಂದು ರಷ್ಯಾ ಬುಧವಾರ ಹೇಳಿದೆ.
ಸ್ಪುಟ್ನಿಕ್ ವಿ ಲಸಿಕೆ ಪರಿಣಾಮಕಾರಿತ್ವವು ಶೇಕಡಾ 92 ರಷ್ಟಿದೆ (ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳು ಮತ್ತು ಪ್ಲಾಸ್ಮಾ ಚಿಕಿತ್ಸೆ ಪಡೆದವರ ನಡುವೆ ನಡೆಸಲಾದ 20 ದೃಢೀಕರಿಸಿದ ಕೋವಿಡ್ ಪ್ರಕರಣಗಳ ಆಧಾರದ ಮೇಲೆ ಲೆಕ್ಕಾಚಾರ)”ಎಂದು ರಷ್ಯಾ ಡೈರೆಕ್ಟ್ ಇವೆಸ್ಟ್ ಮೆಂಟ್ ಫಂಡ್ (ಆರ್‍ಡಿಐಎಫ್) ಹೇಳಿಕೆಯಲ್ಲಿ ತಿಳಿಸಿದೆ.
ಪ್ರಸ್ತುತ ಸ್ಪುಟ್ನಿಕ್ ವಿ ಲಸಿಕೆಗಾಗಿನ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಲಾಗಿದೆ ಮತ್ತು ಬೆಲಾರಸ್, ಯುಎಇ, ವೆನೆಜುವೆಲಾ ಮತ್ತು ಇತರ ದೇಶಗಳಲ್ಲಿ ಇದು ನಡೆಯುತ್ತಿದೆ.. ಭಾರತದಲ್ಲಿ, ಲಸಿಕೆಯ ಎರಡು, ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಪ್ರಸ್ತುತ, 40,000 ಸ್ವಯಂಸೇವಕರು ಸ್ಪುಟ್ನಿಕ್ ವಿ ವಿವಿಧ ಹಂತದ ಪ್ರಯೋಗದಲ್ಲಿ ನಿರತವಾಗಿದ್ದು 20 ಸಾವಿರ ಮಂದಿಯನ್ನು ಮೊದಲ ಡೋಸ್ಗೆ ಹಾಗೂ 16 ಸಾವಿರಕ್ಕೂ ಹೆಚ್ಚು ಮಂದಿಯನ್ನು ಮೊದಲ ಮತ್ತು ಎರಡನೇ ಡೋಸ್ ಪ್ರಯೋಗಗಳಿಗೆ ಒಳಪಡಿಸಲಾಗಿದೆ.