ಶಾಸಕ ಮುನಿರತ್ನಗೆ ಕೋರ್ಟ್ ಶಾಕ್

12/11/2020

ಬೆಂಗಳೂರು ನ.12 : ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೆÇೀಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.
ನಕಲಿ ಗುರುತಿನ ಚೀಟಿ ಪ್ರಕರಣವನ್ನು ಪೆÇೀಲೀಸರು ಸರಿಯಾದ ಕ್ರಮದಲ್ಲಿ ತನಿಖೆ ಮಾಡಿಲ್ಲ ಅದಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಎನ್. ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪಿಠ ವಿಚಾರಣೆ ನಡೆಸಿ ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೆ ಎಲ್ಲವೆ ನ್ನುವುದನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೆÇಲೀಸ್ ಮಹಾನಿರ್ದೇಶಕರು ನೇಮಕ ಮಾಡಬೇಕು. ಅವರು ಪರಿಶೀಲನೆ ನಡೆಸಿ ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿಕೋರ್ಟ್ ಗೆ ವರದಿ ನೀಡಬೇಕು ಎಂದು ಆದೇಶಿಸಿದೆ.