ಮತದಾರರ ಪಟ್ಟಿ ಪರಿಷ್ಕರಣೆ : ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ

November 12, 2020

ಮಡಿಕೇರಿ ನ.12 : ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕೈಗೊಳ್ಳುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ರಾಜಕೀಯ ಪಕ್ಷಗಳ ಪ್ರಮುಖರಾದ ತೆನ್ನೀರ ಮೈನಾ(ಕಾಂಗ್ರೆಸ್), ಮನು ಮಂಜುನಾಥ್(ಬಿಜೆಪಿ) ಇತರರ ಉಪಸ್ಥಿತಿಯಲ್ಲಿ ಗುರುವಾರ ಸಭೆ ನಡೆಯಿತು.
ನಗರದ ಜಿಲ್ಲಾಡಳಿತ ಭವನದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶ್ರೀನಿವಾಸ್ ಅವರು ಭಾರತ ಚುನಾವಣಾ ಆಯೋಗವು 2021 ರ ಜನವರಿ, 01 ನ್ನು ಅರ್ಹತಾ ದಿನಾಂಕವಾಗಿ ಮಾಡಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕೈಗೊಳ್ಳುತ್ತಿದೆ ಎಂದು ಅವರು ಮಾಹಿತಿ ನೀಡಿದರು.
2021 ರ ಜನವರಿ 1 ನೇ ದಿನಾಂಕಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿಯನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಕಚೇರಿಗೆ ಸಲ್ಲಿಸಬಹುದಾಗಿದೆ ಎಂದರು.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಮೂನೆ-6ಎ ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಾಗರಿಕರು ನೇರವಾಗಿ ತಿತಿತಿ.ಟಿvsಠಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ನಮೂನೆ-6,7,8 ಮತ್ತು 8ಎ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದರು.
ರಾಜಕೀಯ ಪಕ್ಷದ ಬೂತ್‍ಮಟ್ಟದ ಎಜೆಂಟರುಗಳು ನಮೂನೆ ಸ್ವೀಕರಿಸುವುದು. ಬೂತ್ ಮಟ್ಟದ ಎಜೆಂಟರುಗಳು ದೊಡ್ಡ ಪ್ರಮಾಣದಲ್ಲಿ (ಃuಟಞ) ನಮೂನೆಗಳನ್ನು ನೀಡಬಾರದು. ಒಂದೇ ವೇಳೆಯಲ್ಲಿ / ಒಂದೇ ದಿನ 10 ಕ್ಕಿಂತ ಹೆಚ್ಚು ನಮೂನೆಗಳನ್ನು ನೀಡಬಾರದು. ಇದು ಸೇರ್ಪಡೆ ಮತ್ತು ಅಕ್ಷೇಪಣೆಗೆ ಸಂಬಂಧಿಸಿದ ಪರಿಷ್ಕರಣೆಯ ಎಲ್ಲಾ ದಿನಗಳು ಸೇರಿದಂತೆ 30 ಕ್ಕಿಂತ ಹೆಚ್ಚು ನಮೂನೆಗಳನ್ನು ನೀಡಬಾರದು.
ಮತಗಟ್ಟೆವಾರು ಬೂತ್ ಮಟ್ಟದ ಎಜೆಂಟರುಗಳನ್ನು ನೇಮಕ ಮಾಡಿರುವ ಬಗ್ಗೆ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಎಜೆಂಟರುಗಳ ಹೆಸರು ವಿವರಗಳನ್ನು ಮತಗಟ್ಟೆವಾರು ನೀಡುವುದು. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹೆಚ್ಚು ಅರ್ಹ ನಾಗರಿಕರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮತ್ತು ಮೃತ, ಸ್ಥಳಾಂತರ, ಪುನರವರ್ತನೆಯಾಗಿರುವ ಮತದಾರರನ್ನು ಕೈಬಿಡಲು ಸೂಕ್ತ ಸಹಕಾರವನ್ನು ನೀಡುವುದು.
ಕರಡು ಮತದಾರರ ಪಟ್ಟಿಯನ್ನು ನವೆಂಬರ್, 18 ರಂದು ಪ್ರಕಟಿಸಲಾಗುತ್ತದೆ. ನವೆಂಬರ್, 18 ರಿಂದ ಡಿಸೆಂಬರ್, 17 ರವರೆಗೆ ಮತದಾರರ ಪಟ್ಟಿ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಹಾಗೆಯೇ ನವೆಂಬರ್, 22, 29, ಡಿಸೆಂಬರ್, 06 ಮತ್ತು 13 ರಂದು ವಿಶೇಷ ಅಭಿಯಾನ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ರಾಜಕೀಯ ಪಕ್ಷಗಳ ಪ್ರಮುಖರಾದ ತೆನ್ನೀರ ಮೈನಾ(ಕಾಂಗ್ರೇಸ್), ಮನು ಮಂಜುನಾಥ್(ಬಿಜೆಪಿ) ಅವರು ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಹಲವು ಸಲಹೆ ಮಾಡಿದರು. ಶಿರಸ್ತೆದಾರರಾದ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.

error: Content is protected !!