ನ.18 ರಂದು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ

12/11/2020

ಮಡಿಕೇರಿ ನ.12 : ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ ಮತ್ತು ಮಹಿಳಾ) ಒಟ್ಟು 50 ಹುದ್ದೆಗಳ ನೇಮಕಾತಿ ಸಂಬಂಧ ಈಗಾಗಲೇ ಲಿಖಿತ ಪರೀಕ್ಷೆಗೆ ಹಾಜರಾಗಿ 1:5ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ನ. 18 ರಂದು ಬೆಳಗ್ಗೆ 7 ಗಂಟೆಯಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ ನಡೆಯಲಿದೆ.
ಈ ಬಗ್ಗೆ ಅರ್ಹ ಅಭ್ಯರ್ಥಿಗಳು ನವೆಂಬರ್, 18 ರಂದು ಈ ಪರೀಕ್ಷೆಗೆ ಕೇಳಲಾಗಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ತಪ್ಪದೆ ಬೆಳಗ್ಗೆ 7 ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹಾಜರಿರುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.inರಲ್ಲಿ ಪಡೆಯಬಹುದು ಎಂದು ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರಾದ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.