ಸಿದ್ದು ಹುದ್ದೆ ಉಳಿಯುವುದೇ ಕಷ್ಟ : ಡಿವಿಎಸ್ ವ್ಯಂಗ್ಯ

13/11/2020

ಮಡಿಕೇರಿ ನ.13 : ಕರ್ನಾಟಕದಲ್ಲಿ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭ ಸುದ್ದಿಗಾರರೊಂದಿಗೆ ಪತ್ರಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಬಿಜೆಪಿ ಪಕ್ಷದ ಬಗ್ಗೆ ಮಾತನಾಡುತ್ತಿರುವ ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ ಎಂದರು.
ಕುಶಾಲನಗರ ಸಮೀಪದ ಗುಡ್ಡೆಹೊಸೂರಿನಲ್ಲಿ ತಮ್ಮ ಬೀಗರಾದ ನಾಣಯ್ಯ ಅವರ ಮನೆಯಲ್ಲಿ ಮೊಮ್ಮಗನ ನಾಮಕರಣ ಮಾಡಿದ ಡಿವಿಎಸ್ ದಂಪತಿಗಳು, ಮೊಮ್ಮಗನಿಗೆ ಶುಭ ಹಾರೈಸಿದರು.