ಕುಟ್ಟ ಪೊಲೀಸ್ ಠಾಣೆಯಲ್ಲಿ ರಾಷ್ಟ್ರಪತಿ ಪದಕ ವಿಜೇತ ಸಿ. ಎನ್. ದಿವಾಕರ್ ಗೆ ಸನ್ಮಾನ

13/11/2020

ಗೋಣಿಕೊಪ್ಪಲು ನ 11. ರಾಷ್ಟ್ರಪತಿ ಪದಕ ವಿಜೇತ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಸಿ ಎನ್ ದಿವಾಕರ್ ಅವರನ್ನು ಕುಟ್ಟ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ದಿವಾಕರ್ , ತಾವು ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಸಹಕರಿಸಿದ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿದರು.
ಈ ಸಂಧರ್ಭದಲ್ಲಿ ವಿರಾಜಪೇಟೆ ಡಿವೈಎಸ್ಪಿ ಜಯಕುಮಾರ್, ಕುಟ್ಟ ವೃತ್ತ ನಿರೀಕ್ಷಕ ಬಿ ಪರಶಿವಮೂರ್ತಿ , ಠಾಣಾಧಿಕಾರಿ‌ ಎಚ್ಡಿ ಚಂದ್ರಪ್ಪ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.