ಕೋವಿಡ್-19 ವಿಶೇಷ ಪ್ರಚಾರಾಂದೋಲಕ್ಕೆ ಕೊಡಗು ಡಿಸಿ ಚಾಲನೆ

13/11/2020

ಮಡಿಕೇರಿ ನ.13 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್-19 ಹಿನ್ನೆಲೆ ಕೊರೊನಾ ವೈರಸ್ ಹರಡುವುದನ್ನು ತಡೆಯುವಲ್ಲಿ ಎಲ್‍ಇಡಿ ವಾಹನ ಮೂಲಕ ಆಯೋಜಿಸಲಾಗಿರುವ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶುಕ್ರವಾರ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಬೃಹತ್ ಎಲ್‍ಇಡಿ ಪರದೆ ಹೊಂದಿರುವ ಮೊಬೈಲ್ ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕೋವಿಡ್ ಕೋವಿಡ್-19 ಮಹಾಮಾರಿ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಲು ಶ್ರವ್ಯ ಮತ್ತು ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್‍ಇಡಿ ಪರದೆ ಹೊಂದಿರುವ ಮೊಬೈಲ್ ವಾಹನ ಬಳಸಿಕೊಂಡು ವಿಶೇಷ ಜಾಗೃತಿ ಪ್ರಚಾರಾಂದೋಲನಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಚಿನ್ನಸ್ವಾಮಿ ತಿಳಿಸಿದರು.