ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳ ಸಂಖ್ಯೆ 102

November 14, 2020

ಮಡಿಕೇರಿ ನ.14 : ಕೊಡಗು ಜಿಲ್ಲೆಯಲ್ಲಿ ಶನಿವಾರ 10 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ದಿನ 20 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಹೊಸದಾಗಿ ಈ ದಿನ 5 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 8 ಪ್ರದೇಶವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 78486 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಪಾಸಿಟಿವ್ ಪ್ರಕರಣಗಳು 5,154, ನೆಗೆಟಿವ್ ವರದಿ ಬಂದ ಪ್ರಕರಣಗಳು 72,700, ವರದಿ ನಿರೀಕ್ಷಿತ ಪ್ರಕರಣಗಳು-632, ಮೃತಪಟ್ಟ ಪ್ರಕರಣಗಳು 70 ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ 15, ಹೋಂ ಐಸೋಲೇಶನ್ ನಲ್ಲಿ 87 ಮಂದಿ ಇದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 102 ಮತ್ತು ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ 115 ಆಗಿದೆ ಎಂದರು.

error: Content is protected !!