ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 5187

16/11/2020

ಮಡಿಕೇರಿ ನ. 16 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 20 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5187 ಆಗಿದ್ದು, 4998 ಮಂದಿ ಗುಣಮುಖರಾಗಿದ್ದಾರೆ. 119
ಸಕ್ರಿಯ ಪ್ರಕರಣಗಳಿದ್ದು, 70 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 112 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.