ಕನ್ನಡಪರ ಸಂಘಟನೆಗಳ ವಿರೋಧ

November 16, 2020

ಬೆಂಗಳೂರು ನ.16 : ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ.
ಇಂದು ನಗರದಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಿಎಂ ನಿರ್ಧಾರವನ್ನು ಖಂಡಿಸಿ ನಾಡಿದ್ದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತೇವೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.
ಬೇರೆ ರಾಜ್ಯಗಳಲ್ಲಿ ಭಾಷೆಯನ್ನು ಅಭಿವೃದ್ಧಿ ಮಾಡುವ ಕೆಲಸವಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಆಗಲೇ ಇಲ್ಲ. ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿ ಕೊಟ್ಟಿದ್ದಾರೆ. 2020-21ರಲ್ಲಿ ಕನ್ನಡ ಅನುಷ್ಟಾನ ಮತ್ತು ಅಭಿವೃದ್ಧಿಗಾಗಿ ಪ್ರಯತ್ನ ಮಾಡೋಣ ಅಂತ ಸಿಎಂ ಹೇಳಿದ್ದರು, ಆದರೆ ಇಲ್ಲಿಯವರೆಗೆ 2 ಕೋಟಿ ಕೇಳಿದರೂ ಕನ್ನಡ ಅಭಿವೃದ್ಧಿಗೆ ಕೊಡುವುದಕ್ಕೆ ಆಗಲಿಲ್ಲ. ಆದರೆ ಮರಾಠ ಅಭಿವೃದ್ಧಿಗೆ 50 ಕೋಟಿ ಕೊಟ್ಟಿದ್ದಾರೆ ಎಂದು ಗುಡುಗಿದರು.

error: Content is protected !!