ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನ. 20ರ ವರೆಗೆ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ

17/11/2020

ಮಡಿಕೇರಿ ನ. 17 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಅಂತಿಮ ಪದವಿ ಹಾಗೂ ಅಂತಿಮ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನ.17ರಿಂದ 20ರವರೆಗೆ ನಡೆಯಲಿದೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಕೋವಿಡ್ ಟೆಸ್ಟ್ ಹಮ್ಮಿಕೊಳ್ಳಲಾಗಿದ್ದು, ಅಂತಿಮ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕಾಲೇಜು ಪ್ರಾಂಶುಪಾಲರಾದ ಜಗತ್ ತಿಮ್ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.