ನ.19 ರಂದು ಸಹಕಾರ ಸಂಸ್ಥೆಗಳ ದಿನಾಚರಣೆ

17/11/2020

ಮಡಿಕೇರಿ ನ.17 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಸಹಕಾರ ಕೂಟ ನಿ., ಶಿರಂಗಾಲ, ತೊರೆನೂರು, ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 67 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಯುವಜನ, ಮಹಿಳಾ ಮತ್ತು ಅಬಲವರ್ಗದವರಿಗಾಗಿ ಸಹಕಾರ ಸಂಸ್ಥೆಗಳು ದಿನಾಚರಣೆಯು ನವೆಂಬರ್, 19 ರಂದು ಬೆಳಗ್ಗೆ 10.30 ಗಂಟೆಗೆ ಶಿರಂಗಾಲದ ದೇವತಾ ಸಮಿತಿ ಕಾರ್ಯಾಲಯದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನು ಮುತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ, ಶಿರಂಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಎಸ್.ಚಂದ್ರಶೇಖರ್, ಜಿ.ಪಂ. ಸದಸ್ಯರಾದ ಎಚ್.ಆರ್.ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.