ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

November 17, 2020

ಮಡಿಕೇರಿ ನ.17 : ಪ್ರತಿ ವರ್ಷದಂತೆ ಈ ಬಾರಿಯು ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ಡಿ.31 ರೊಳಗೆ ಸೂಕ್ತ ದಾಖಲೆ ಸಹಿತ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹತ್ತನೇ ತರಗತಿಯಲ್ಲಿ ಗ್ರಾಮೀಣ ವಿಭಾಗ ಶೇ. 85 ಮೇಲ್ಪಟ್ಟು ಹಾಗೂ ನಗರ ವಿಭಾಗ ಶೇ. 90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.
ಸಿ.ಇ.ಟಿ ಮತ್ತು ಎನ್.ಇ.ಇ.ಟಿ ಯಲ್ಲಿ 1000 ರ್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೂಡ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸುವಂತೆ ತಿಳಿಸಿದ್ದಾರೆ.
ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ಸೂಕ್ತ ದಾಖಲೆಯೊಂದಿಗೆ ಸಂಘದ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಡಿ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 94807 75772 ಸಂಪರ್ಕಿಸಬಹುದಾಗಿದೆ ಎಂದು ರಮೇಶ್ ಜೋಯಪ್ಪ ಹೇಳಿದ್ದಾರೆ.

error: Content is protected !!