ಕೊಡಗು ಕಾಂಗ್ರೆಸ್ ನಿಂದ ನ.19 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ದಿನ ಆಚರಣೆ

November 17, 2020

ಮಡಿಕೇರಿ ನ.17 : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನ.19 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಡಿಸಿಸಿ ಪದಾಧಿಕಾರಿಗಳು, ಸದಸ್ಯರು, ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ರಾಜ್ಯದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

error: Content is protected !!