ಕೊಡವ ಮಕ್ಕಡ ಕೂಟಕ್ಕೆ ಅಧ್ಯಕ್ಷರಾಗಲು ಅವಕಾಶ : ಉತ್ಸಾಹಿ ಯುವಕರು ಮುಂದೆ ಬರಲು ಮನವಿ : ರಾಜಕೀಯ ಕ್ಷೇತ್ರದೆಡೆಗೆ ಬೊಳ್ಳಜಿರ ಬಿ.ಅಯ್ಯಪ್ಪ

November 17, 2020

ಮಡಿಕೇರಿ ನ.17 : ಕಳೆದ ಎಂಟು ವರ್ಷಗಳಿಂದ ಕೊಡವ ಮಕ್ಕಡ ಕೂಟದ ಅಧ್ಯಕ್ಷನಾಗಿ ಹಲವು ಯಶಸ್ವಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ನ್ಯಾಯ ಒದಗಿಸಿದ ತೃಪ್ತಿ ಇದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಮಡಿಕೇರಿಯ ಹೃದಯ ಭಾಗದಲ್ಲಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಯನ್ನು ಸ್ಥಾಪಿಸಿದ ಹೆಗ್ಗಳಿಕೆ ನಮ್ಮದಾಗಿದೆ. ಮುಂದಿನ ದಿನಗಳಲ್ಲಿ ನಾನು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸುವ ಉದ್ದೇಶ ಹೊಂದಿದ್ದು, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡುವುದಾಗಿ ಅಯ್ಯಪ್ಪ ತಿಳಿಸಿದರು.
ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಳ್ಳಬಲ್ಲ ಉತ್ಸಾಹಿ ಯುವಕರು ಮುಂದೆ ಬಂದಲ್ಲಿ ನ.22 ರಂದೇ ಅಧಿಕಾರವನ್ನು ಹಸ್ತಾಂತರಿಸುವುದಾಗಿ ಹೇಳಿದರು.

error: Content is protected !!