ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 5208

November 18, 2020

ಮಡಿಕೇರಿ ನ. 18 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 13 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಾಳು ಕಂಡುಬಂದಿವೆ. ಈ ಪೈಕಿ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5208 ಆಗಿದ್ದು, 5027 ಮಂದಿ ಗುಣಮುಖರಾಗಿದ್ದಾರೆ. 111
ಸಕ್ರಿಯ ಪ್ರಕರಣಗಳಿದ್ದು, 70 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 104 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!