ಮಾಜಿ ಮೇಯರ್ ಸಂಪತ್ ಸಿಸಿಬಿ ಕಸ್ಟಡಿಗೆ

18/11/2020

ಬೆಂಗಳೂರು ನ.18 : ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ.
ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಬಂಧನಕ್ಕಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿತ್ತು. ಇನ್ನು ಸಂಪತ್ ಸೆರೆ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅವರನ್ನು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಸಂಪತ್ ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ 2 ದಿನಕ್ಕೆ ಮಾತ್ರ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೆÇಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೆÇಲೀಸರು ಸಂಪತ್ ರಾಜ್ ನನ್ನು ಬಂಧಿಸಿದ್ದರು. ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದರು.