ಅಬಕಾರಿ ಅಕ್ರಮ ತಡೆಯಲು ಸಹಕರಿಸಿ : ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಮನವಿ

18/11/2020

ಮಡಿಕೇರಿ ನ.18 : ಅಬಕಾರಿ ಆಯುಕ್ತರು, ಕರ್ನಾಟಕ ರಾಜ್ಯ, ಬೆಂಗಳೂರು ಮತ್ತು ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ರವರ ನಿರ್ದೇಶನದಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾದ್ಯಂತ ಕಳ್ಳಭಟ್ಟಿ/ ಸೇಂದಿ/ ಬೆಲ್ಲದ ಕೊಳೆ ಸೇರಿದಂತೆ ಅಕ್ರಮ ಮದ್ಯ ಮಾರಾಟ ಸಂಬಂಧಿತ ಹಾಗೂ ಗಾಂಜ/ ಡ್ರಗ್ಸ್/ ಅಫೀಮು ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಸೇವನೆ/ ಮಾರಾಟ ನಿಯಂತ್ರಿಸುವ ಸಂಬಂಧ ಸಾರ್ವಜನಿಕರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸುವಂತೆ ಅಬಕಾರಿ ಉಪ ಆಯುಕ್ತರಾದ ಬಿಂದುಶ್ರೀ ಅವರು ಕೋರಿದ್ದಾರೆ.
ಅಬಕಾರಿ ಆಯುಕ್ತರ ಕಚೇರಿ, ಕರ್ನಾಟಕ ರಾಜ್ಯ, ಬೆಂಗಳೂರು ಕಂಟ್ರೋಲ್ ರೂಂ ನಿರ್ವಾಹಣಾಧಿಕಾರಿ 18004252 550(ಟೋಲ್ ಫ್ರೀ), ಅಬಕಾರಿ ಜಂಟಿ ಆಯುಕ್ತರ ಕಚೇರಿ, (ಜಾರಿ ಮತ್ತು ತನಿಖೆ), ಮಂಗಳೂರು ವಿಭಾಗ, ಮಂಗಳೂರು, ಕಚೇರಿ ದೂ.ಸಂ.0824-2225498, ಅಬಕಾರಿ ಉಪ ಆಯುಕ್ತರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಕಂಟ್ರೋಲ್ ರೂಂ ನಿರ್ವಾಹಣಾಧಿಕಾರಿ 08272-229110(ಟೋಲ್ ಫ್ರೀ), ಅಬಕಾರಿ ಉಪ ಆಯುಕ್ತರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ 9449597135, ಅಬಕಾರಿ ಉಪ ಆಯುಕ್ತರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಅಬಕಾರಿ ನಿರೀಕ್ಷಕರು ವಿಚಕ್ಷಣ ದಳ 9449597137, ಅಬಕಾರಿ ನಿರೀಕ್ಷಕರ ಕಚೇರಿ, ಮಡಿಕೇರಿ ವಲಯ, ಅಬಕಾರಿ ನಿರೀಕ್ಷಕರು 9449597139, ಅಬಕಾರಿ ಉಪ ಅಧೀಕ್ಷಕರ ಕಚೇರಿ, ಮಡಿಕೇರಿ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರು 9449597780, ಅಬಕಾರಿ ನಿರೀಕ್ಷಕರ ಕಚೇರಿ, ಸೋಮವಾರಪೇಟೆ ವಲಯ ಅಬಕಾರಿ ನಿರೀಕ್ಷಕರು 9449252456/ 9448675495, ಅಬಕಾರಿ ಉಪ ಅಧೀಕ್ಷಕರ ಕಚೇರಿ, ಸೋಮವಾರಪೇಟೆ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರು 9449597136, ಅಬಕಾರಿ ನಿರೀಕ್ಷಕರ ಕಚೇರಿ, ವಿರಾಜಪೇಟೆ ವಲಯ ಅಬಕಾರಿ ನಿರೀಕ್ಷಕರು 9449597141, ಅಬಕಾರಿ ಉಪ ಅಧೀಕ್ಷಕರ ಕಚೇರಿ, ವಿರಾಜಪೇಟೆ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರು 9449597140 ನ್ನು ಸಂಪರ್ಕಿಸಬಹುದು.