ಸುಂಟಿಕೊಪ್ಪ ಗ್ರಾ.ಪಂ ಮಾಜಿ ಸದಸ್ಯ ಆಲಿ ನಿಧನ

18/11/2020

ಸುಂಟಿಕೊಪ್ಪ,ನ.18: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಎ1 ಆಲಿ (44) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಕುಶಾಲನಗರದಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದ ಆಲಿಯವರಿಗೆ ತಾ.17 ರಂದು ರಾತ್ರಿ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮಾರ್ಗ ಮಧ್ಯದಲ್ಲಿ ಕೊನೆಯುಸಿರು ಎಳೆದಿದ್ದಾರೆ.
ಸುಂಟಿಕೊಪ್ಪದ ಇಸಾಕ್ ಅವರ ಮನೆಯಲ್ಲಿ ಮೃತದೇಹವನ್ನು ಇರಿಸಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು. ನಂತರ ಮುಸ್ಲಿಂ ಖಬರ್‍ಸ್ತಾನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.