ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರ ನಾಮ ನಿರ್ದೇಶನ

18/11/2020

ಮಡಿಕೇರಿ ನ.18 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರನ್ನಾಗಿ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಪ್ರತಿನಿಧಿಯಾಗಿ ಡಾ.ಬಿ.ಸಿ.ನವೀನ್ ಕುಮಾರ್, ಮಕ್ಕಳ ತಜ್ಞರು, ಶ್ರೀ ರಾಜರಾಜೇಶ್ವರಿ ಆಸ್ಪತ್ರೆ, ಮಡಿಕೇರಿ, ಸಾಮಾಜಿಕ ಕ್ಷೇತ್ರದ ಪ್ರತಿನಿಧಿಯಾಗಿ ನಿರಂಜನ್ ಎಂ.ಎ, ವಕೀಲರು, ಮಡಿಕೇರಿ, ಸರ್ಕಾರೇತರ ಸಂಸ್ಥೆಯ ಮಹಿಳಾ ಪ್ರತಿನಿಧಿಯಾಗಿ ಡಾ.ಜಯಲಕ್ಷ್ಮಿ ಪಾಟ್ಕರ್ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.