ದ್ವಿತೀಯ ಪಿಯುಸಿ ತರಗತಿಗೆ ದಾಖಲಾತಿಗೆ ಅವಧಿ ವಿಸ್ತರಣೆ

November 19, 2020

ಮಡಿಕೇರಿ ನ.19 : ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿಗೆ ದ್ವಿತೀಯ ಪಿಯುಸಿ ತರಗತಿಗಳಿಗೆ ವಿದ್ಯಾರ್ಥಿಗಳು ದಾಖಲಾತಿ ಹೊಂದಲು ದಿನಾಂಕ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ದಾಖಲಾತಿ ಮತ್ತು ಕಾಲೇಜು ಬದಲಾವಣೆಯನ್ನು ನವೆಂಬರ್, 27 ರವರೆಗೆ ವಿಸ್ತರಿಸಲಾಗಿದೆ. ದಾಖಲಾತಿ ಶುಲ್ಕವನ್ನು ಖಜಾನೆಗೆ ಮರುದಿನ ಕಾರ್ಯನಿರತ ದಿನದಂದು ಕಡ್ಡಾಯವಾಗಿ ಪಾವತಿಸುವುದು.
2020-21 ನೇ ಸಾಲಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ದ್ವಿತೀಯ ಪಿಯುಸಿ ದಾಖಲಾತಿ ಮತ್ತು ಕಾಲೇಜು ಬದಲಾವಣೆ ಪ್ರಕ್ರಿಯೆಯ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

error: Content is protected !!