ನ.25 ರಂದು ಕಾನೂನುಬದ್ಧ ದತ್ತು ಬಗ್ಗೆ ಮಾಹಿತಿ ಕಾರ್ಯಕ್ರಮ

19/11/2020

ಮಡಿಕೇರಿ ನ.19 : -ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಮಕ್ಕಳನ್ನು ಕಾನೂನುಬದ್ಧವಾಗಿ ದತ್ತು ಪಡೆಯುವ ಕುರಿತಂತೆ ಬಾಲನ್ಯಾಯ ಕಾಯ್ದೆ 2015 ಮತ್ತು ಕೇಂದ್ರ ಸರ್ಕಾರದ ದತ್ತು ಮಾರ್ಗಸೂಚಿ 2017 ರಲ್ಲಿರುವ ಅವಕಾಶಗಳಡಿ ದತ್ತು ಪ್ರಕ್ರಿಯೆ, ಪೋಷಕತ್ವ ಇವುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ನವೆಂಬರ್ 25 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಕಲ್ಯಾಣ ಮಂಟಪದ ಬಳಿ, ಮಡಿಕೇರಿ ಇಲ್ಲಿ ಆಯೋಜಿಸಲಾಗಿದೆ. ಮಕ್ಕಳನ್ನು ದತ್ತು ಪಡೆಯಲು ಆಸಕ್ತಿ ಇರುವ ಅರ್ಹ ದಂಪತಿಗಳು ಮತ್ತು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇಚ್ಛಿಸುವ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.