ನ.21 ರಂದು ವಿರಾಜಪೇಟೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

November 19, 2020

ಮಡಿಕೇರಿ ನ.19 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ನವೆಂಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿರಾಜಪೇಟೆ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅದ್ದರಿಂದ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

error: Content is protected !!