ಮಡಿಕೇರಿಯಲ್ಲಿ ನ.20 ರಂದು 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮರೋಪ ಸಮಾರಂಭ

ಮಡಿಕೇರಿ ನ.19 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 67 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಪ್ರಯುಕ್ತ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ಡಿಜಿಟಲೈಜೇಷನ್ ಮತ್ತು ಸಾಮಾಜಿಕ ಜಾಲತಾಣ ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್, 20 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೊಹಿನೂರ್ ರಸ್ತೆಯ ಎಸ್ಬಿಐ ಸಮೀಪದ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿದೋದ್ಧೇಶ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಸಹಕಾರಿಗಳು ಹಾಗೂ ಕೊಡಗು ಸಹಕಾರ ರತ್ನ ಪ್ರಶಸ್ತಿ ಪುರಸ್ಕøತರಾದ ಎಂ.ಪಿ.ಮುತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಎ.ಕೆ.ಮನುಮುತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ, ಉಪಾಧ್ಯಕ್ಷರಾದ ಕೆ.ಎಸ್.ಹರೀಶ್ ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾದ ಪಟ್ಟಡ ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಬಿ.ಡಿ.ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ.
