ಕುಶಾಲನಗರ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

19/11/2020

ಮಡಿಕೇರಿ ನ.19 : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕುಶಾಲನಗರದ ಕೂಡ್ಲೂರುವಿನ ಕೈಗಾರಿಕಾ ಬಡಾವಣೆಗೆ ಗುರುವಾರ ಭೇಟಿ ನೀಡಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ರೂ.9.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕುಶಾಲನಗರ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ಪರಿಶೀಲನೆ ಸಂದರ್ಭ ಸುಮಾರು 114 ಕೈಗಾರಿಕಾ ಘಟಕಗಳಿಂದ ಸ್ಥಳೀಯ ಗ್ರಾಮ ಪಂಚಾಯತಿಗೆ ಅಂದಾಜು ರೂ.1.09 ಕೋಟಿ ತೆರಿಗೆ ಬರಲು ಬಾಕಿ ಇರುವುದು ಗಮನಕ್ಕೆ ಬಂದಿದ್ದು, ಸರ್ಕಾರದ ಇತ್ತೀಚಿನ ಆದೇಶದಂತೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಈ ತೆರಿಗೆಯನ್ನು ವಸೂಲಾತಿ ಮಾಡಿ, ಸ್ಥಳೀಯ ಗ್ರಾಮ ಪಂಚಾಯತಿಗೆ ಪಾವತಿಸಲು ನಿರ್ದೇಶನ ನೀಡಿದರು.
ಪರಿಶೀಲನೆ ಸಂದರ್ಭ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರಾದ ಲಿಂಗರಾಜು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಹಾಯಕ ಮುಖ್ಯ ವ್ಯವಸ್ಥಾಪಕರು, ತಹಶೀಲ್ದಾರ್, ಸೋಮವಾರಪೇಟೆ, ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯತಿ, ಸೋಮವಾರಪೇಟೆ ಮತ್ತು ಸ್ಥಳೀಯ ಕಂದಾಯಾಧಿಕಾರಿಗಳು ಇತರರು ಇದ್ದರು.