ಮಡಿಕೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ

19/11/2020

ಮಡಿಕೇರಿ ನ.19 : ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್ ಅವರು ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬೋಧಿಸಿದರು.
ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆ ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆಂದು ಶ್ರದ್ಧಾಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ. ಅಲ್ಲದೆ ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಬಾμÉ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದುಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣವಚನ ಸ್ವೀಕರಿಸಲಾಯಿತು. ವಿವಿದ ಇಲಾಖೆಯ ಅಧಿಕಾರಿಗಳು ಇದ್ದರು.