ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳ ಸಂಖ್ಯೆ 97

November 20, 2020

ಮಡಿಕೇರಿ ನ. 20 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 7 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5229 ಆಗಿದ್ದು, 5061 ಮಂದಿ ಗುಣಮುಖರಾಗಿದ್ದಾರೆ. 97
ಸಕ್ರಿಯ ಪ್ರಕರಣಗಳಿದ್ದು, 71 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 86 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!