ಎನ್ಕೌಂಟರ್ ನಲ್ಲಿ 4 ಉಗ್ರರು ಬಲಿ

20/11/2020

ಶ್ರೀನಗರ ನ.20 : ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಾಗ್ರೊಟಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಹತರಾದ ನಾಲ್ವರು ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುವ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಗೆ ಅಡ್ಡಿಯುಂಟು ಮಾಡುವ ಉದ್ದೇಶವನ್ನು ಹೊಂದಿದ್ದರು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.
ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರ ನಾಗ್ರೊಟಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದರು.
ಎನ್ಕೌಂಟರ್ ಕುರಿತು ಮಾಹಿತಿ ನೀಡಿರುವ ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಪ್ರಕ್ರಿಯೆಯನ್ನು ನಾಶಪಡಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಇದಕ್ಕಾಗಿಯೇ ಕಳೆದ ಕೆಲವು ದಿನಗಳಿಂದ ಭಾರತದೊಳಗೆ ನುಸುಳುವಂತೆ ಉಗ್ರರಿಗೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ. ಆದರೆ, ಜಮ್ಮು ಮತ್ತು ಕಾಶ್ಮೀರ ಪೆÇಲೀಸರು ಹಾಗೂ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿರುವುದರಿಂದ ಉಗ್ರರ ನುಸುಳುವಿಕೆ ಪ್ರಯತ್ನಗಳು ವಿಫಲಗೊಳ್ಳುತ್ತಿವೆ. ಪ್ರಸ್ತುತ ಹತ್ಯೆಯಾಗಿರುವ ಈ ನಾಲ್ವರು ಉಗ್ರರು ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುವ ಉದ್ದೇಶವನ್ನು ಹೊಂದಿದ್ದರು ಎಂದು ಹೇಳಿದ್ದಾರೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನವಾಗಲೀ, ಜನವರಿ 26 ಅಥವಾ ವಿಐಪಿಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರೆ, ಚುನಾವಣಾ ಸಂದರ್ಭಗಲ್ಲಿ ಉಗ್ರರ ದಾಳಿ, ನುಸುಳಿವಿಕೆ ಯತ್ನಗಳು ಸತತವಾಗಿ ನಡೆಯುತ್ತಲೇ ಇರುತ್ತವೆ. ಆದರೆ, ನಾವು ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಿರುತ್ತೇವೆ. ಚುನಾವಣೆಯಲ್ಲಿ ನಿಲ್ಲುವ ಅಭ್ಯರ್ಥಿಗಳಿಗಳಿಗೆ ಭದ್ರತೆಯನ್ನು ನೀಡುತ್ತಿದ್ದೇವೆ. ಪ್ರಚಾರದ ವೇಳೆ ಪ್ರತೀ ಕ್ಷೇತ್ರದಲ್ಲಿಯೂ ಭದ್ರತೆಯನ್ನು ನೀಡುತ್ತಿದ್ದೇವೆ. ಯಾರೂ ಭೀತಿಗೊಳಗಾಗಬಾರದು ಎಂದು ತಿಳಿಸಿದ್ದಾರೆ.