ಟೆಕ್ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಿ

20/11/2020

ಬೆಂಗಳೂರು ನ.19 : ನಮ್ಮ ಸ್ಥಳೀಯ ತಂತ್ರಜ್ಞಾನಗಳು ಜಾಗತಿಕ ಮಟ್ಟಕ್ಕೇರುವ ಸಾಮಥ್ರ್ಯವನ್ನು ಹೊಂದಿವೆ. ಭಾರತದಲ್ಲಿ ವಿನ್ಯಾಸಗೊಳಿಸ ಲಾದ ತಂತ್ರಜ್ಞಾನಗಳನ್ನು ಜಗತ್ತಿಗೆ ನಿಯೋಜಿಸುವ ಸಮಯ ಈಗ ಬಂದಿದೆ. ಇತ್ತೀಚೆಗೆ ಐಟಿ ಉದ್ಯಮದ ಅನುಸರಣೆ ಹೊರೆಯನ್ನು ಸರಾಗವಾಗಿಸಿದ ಕ್ರಮವೂ ಸೇರಿದಂತೆ ಸರ್ಕಾರದ ನೀತಿ ನಿರ್ಧಾರಗಳು ಯಾವಾಗಲೂ ತಂತ್ರ ಜ್ಞಾನ ಮತ್ತು ನಾವೀನ್ಯತೆ ಉದ್ಯಮವನ್ನು ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಶ್ಲಾಘಿಸಿದರು.
ಬೆಂಗಳೂರು ಟೆಕ್ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಭವಿಷ್ಯದ ನೀತಿ ಚೌಕಟ್ಟುಗಳನ್ನು ರೂಪಿಸಲು ಟೆಕ್ ಉದ್ಯಮದ ಪಾಲುದಾರರನ್ನು ತೊಡಗಿಸಿಕೊಳ್ಳಲು ಸರ್ಕಾರ ಯಾವಾಗಲೂ ಪ್ರಯತ್ನಿಸುತ್ತದೆ. ಇಂದು ಡಿಜಿಟಲ್ ಇಂಡಿಯಾವನ್ನು ಸರ್ಕಾರದ ಒಂದು ಸಾಮಾನ್ಯ ಉಪಕ್ರಮವಾಗಿ ನೋಡುತ್ತಿಲ್ಲ. ಬದಲಿಗೆ ಇದು ವಿಶೇಷವಾಗಿ ಬಡವರಿಗೆ, ಹಿಂದುಳಿದವರಿಗೆ ಮತ್ತು ಸರ್ಕಾರದಲ್ಲಿರುವವರಿಗೆ ಒಂದು ಜೀವನ ವಿಧಾನವಾಗಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದರು.