ದ್ವಿಚಕ್ರ ವಾಹನ ಅವಘಡ : ಸೋಮವಾರಪೇಟೆ ಯುವಕ ಸಾವು

November 20, 2020

ಮಡಿಕೇರಿ ನ.20 : ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ದ್ವಿಚಕ್ರ ವಾಹನ ಅಪಘಾತದಲ್ಲಿ ಜೀವವನ್ನೇ ಕಳೆದುಕೊಂಡಿರುವ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಕರ್ಕಳ್ಳಿ ಗ್ರಾಮದ ರಕ್ಷಿತ್(23) ಎಂಬುವವರೇ ಪ್ರಾಣ ಕಳೆದುಕೊಂಡ ಯುವಕ. ಇಂದು ಮಧ್ಯಾಹ್ನ ಬಸವೇಶ್ವರ ರಸ್ತೆಯ ಮೂಲಕ ದ್ವಿಚಕ್ರ ವಾಹನದಲ್ಲಿ ತಮ್ಮ ಮನೆಗೆ ತೆರಳುವ ಸಂದರ್ಭ ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಪ್ರಾಣ ಬಿಟ್ಟಿದ್ದಾರೆ. ತಲೆ ಹಾಗೂ ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟರು.
ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!