ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5242 : ಸಕ್ರಿಯ ಪ್ರಕರಣಗಳು 97

November 21, 2020

ಮಡಿಕೇರಿ ನ. 21 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 13 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5242 ಆಗಿದ್ದು, 5074 ಮಂದಿ ಗುಣಮುಖರಾಗಿದ್ದಾರೆ. 97
ಸಕ್ರಿಯ ಪ್ರಕರಣಗಳಿದ್ದು, 71 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 83 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.