ವಿರಾಜಪೇಟೆಯಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ ಸಂಸ್ಮರಣಾ ದಿನ ಆಚರಣೆ

November 21, 2020

ವಿರಾಜಪೇಟೆ.ನ.21: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಭಾಷೆಯ ಆದ್ಯ ವರಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ ಸಂಸ್ಮರಣಾ ದಿನವನ್ನು ವಿರಾಜಪೇಟೆಯಲ್ಲಿ ಆಚರಿಸಲಾಯಿತು.
ವಿರಾಜಪೇಟೆಯ ದೊಡ್ಡಟ್ಟಿ ಚೌಕಿ ಬಳಿ ಇರುವ ಅಪ್ಪಚ ಕವಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ಕವಿಗೆ ಗೌರವ ಸೂಚಿಸಲಾಯಿತು.
1868 ರಲ್ಲಿ ಜನಿಸಿದ ಅಪ್ಪಚ್ಚ ಕವಿ 1944ರ ನವೆಂಬರ್ 21 ರಂದು ಮರಣ ಹೊಂದುತ್ತಾರೆ. ಈ ದಿನವನ್ನು ವಿರಾಜಪೇಟೆಯ ತೂಕ್ ಬೊಳಕ್ ಕಲೆ ಕ್ರೀಡೆ ಮತ್ತು ಸಾಹಿತ್ಯ ಅಕಾಡೆಮಿಯು ವಿರಾಜಪೇಟೆಯಲ್ಲಿ 2014ರಿಂದ ಇಂದಿನ ದಿನವನ್ನು ಸಂಸ್ಮರಣ ದಿನವಾಗಿ ಆಚರಿಸಿಕೊಂಡು ಬರುತ್ತಿದ್ದು, ಇಂದು ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಪಾರ್ವತಿ ಅಪ್ಪಯ್ಯ ಪುಷ್ಪಾರ್ಚನೆ ಮಾಡುವುದರೊಂದಿಗೆ ಗೌರವ ಸೂಚಿಸಿದರು.
ಈ ಸಂದರ್ಭದಲ್ಲಿ ತೂಕ್ ಬೊಳಕ್ ಕಲೆ ಕ್ರೀಡೆ ಸಾಹಿತ್ಯ ಅಕಾಡೆಮಿಯ ಸಂಚಾಲಕರಾದ ಮುಲ್ಲೇಂಗಡ ಮಧೋಶ್ ಪೂವಯ್ಯ, ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಸೇರಿದಂತೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರು ಇತರರು ಉಪಸ್ಥಿತರಿದ್ದರು.

error: Content is protected !!