ನ.22 ರಿಂದ ಮತದಾರರ ವಿಶೇಷ ನೋಂದಣಿ ಅಭಿಯಾನ

21/11/2020

ಮಡಿಕೇರಿ ನ.21 : 2021, ಜನವರಿ, 1 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ, ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರು ತೆಗೆಯಲು ನಮೂನೆ-7 ರಲ್ಲಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8ಎ ರಲ್ಲಿ ಮತ್ತು ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎ ರಲ್ಲಿ ಡಿಸೆಂಬರ್, 17 ರವರೆಗೆ ತಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳಿಗೆ ನಿಗಧಿತ ನಮೂನೆಯಲ್ಲಿ (ನಮೂನೆ-6 ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-8ಎ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಸಲ್ಲಿಸಬಹುದಾಗಿದೆ.
ಅಲ್ಲದೇ ನವೆಂಬರ್, 22, ನ.29 ಮತ್ತು ಡಿಸೆಂಬರ್, 06 ಮತ್ತು 13 ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ನಾಗರೀಕರು ಇದರ ಉಪಯೋಗವನ್ನು ಪಡೆದುಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸಹ ಕೋರಿದೆ. ನೋಂದಣಿ ಆಗದೆ ಇದ್ದಲ್ಲಿ ನಮೂನೆ-6 ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿ ಸಂಪರ್ಕಿಸಬಹುದು. ಜೊತೆಗೆ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಪಡೆಯಬಹುದು. ತಿತಿತಿ.ಟಿvsಠಿ.ಟಿiಛಿ.iಟಿ ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ನಮೂನೆ 6, 6ಎ, 7, 8 ಮತ್ತು 8 ರಲ್ಲಿ ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.