ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ನ.21 : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಪ್ರೋತ್ಸಾಹಧನ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮೃದ್ಧಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆರ್ಥಿಕವಾಗಿ ಹಿಂದುಳಿದ, ಬೀಬೀದಿಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಮಹಿಳಾ ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ರೂ.10 ಸಾವಿರಗಳ ಪ್ರೋತ್ಸಾಹಧಟಿ ನೀಡಲಾಗುತ್ತದೆ.
18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಅವರಿಂದ ಬೀದಿಬದಿ ವ್ಯಾಪಾರಿ ಎಂದು ದೃಢೀಕರಿಸಿದ ದಾಖಲೆಯನ್ನು ಪಡೆದಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಬಿ.ಪಿ.ಎಲ್. ಕಾರ್ಡ್ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು.
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿ ಈ ಯೋಜನೆಯ ಅರ್ಜಿಗಳು ಲಭ್ಯವಿದ್ದು ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಡಿಸೆಂಬರ್, 25 ರೊಳಗೆ ಸಲ್ಲಿಸಬಹುದಾಗಿದೆ. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಆದ್ದರಿಂದ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು (ಪ.ಜಾ ಮತ್ತು ಪ.ಪಂ)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ.ಸಂ.9980632352 ಕಚೇರಿ/ ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.