ಸಾಲ ಮತ್ತು ಸಾಹಾಯಧನಕ್ಕೆ ಅರ್ಜಿ ಆಹ್ವಾನ

21/11/2020

ಮಡಿಕೇರಿ ನ.21 : -ಪ್ರಸಕ್ತ(2020-21) ಸಾಲಿನಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಬೈರಾಗಿ (ಬಾವ), ಬಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊಂದಳಿ, ಪುಲ್‍ಲಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್ಶಿಕಾರಿ, ಪಾಂಗ್ಯಯಲ್, ಜೋಷಿ (ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿಮಲಿ, ವಾಯ್ಡು, ವಾಸುದೇವ್, ವಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ (ಬುರ್‍ಬುರ್‍ಚ), ಹಾವಗಾರ್ (ಹಾವಾಡಿಗಾರ್), ಪುಚಗುಂಟಲ, ಮಸಣಿಯ ಯೋಗಿ, (ಬೆಸ್ತರ್), ಬುಂಡಬೆಸ್ತ, ಕಟಬು, ದರ್ವೇಶ್, ಕಾಶಿ ಕಪಾಡಿ, ದೊಂಬಿದಾಸ ಮತ್ತು ಬೈಲ್ ಪತ್ತರ್ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನದ ಸೌಲಭ್ಯ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಈ ಮೇಲ್ಕಂಡ ಜನಾಂಗದವರು ಉಚಿತವಾಗಿ ಅರ್ಜಿ ನಮೂನೆಯನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋವನ್ನು ಮತ್ತು ಸ್ವಸಹಾಯ ಸಂಘದ ದಾಖಲಾತಿಗಳೊಡನೆ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಡಿಸೆಂಬರ್, 02 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಅಥವಾ 08272-221656 ದೂರವಾಣಿ ಮುಖಾಂತರ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚೆನ್ನರಸೇಗೌಡ ಅವರು ತಿಳಿಸಿದ್ದಾರೆ.