ಕೊಡಗಿನಲ್ಲಿ ಕೋವಿಡ್ : ಇಲ್ಲಿಯವರೆಗೆ 84,332 ಮಂದಿಯ ಪರೀಕ್ಷೆ

November 22, 2020

ಮಡಿಕೇರಿ ನ.22 : ಜಿಲ್ಲೆಯಲ್ಲಿ ಭಾನುವಾರ 11 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ 6 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದ್ದು, 19 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 84332 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. 5253 ಪ್ರಕರಣಗಳಲ್ಲಿ ಪಾಸಿಟಿವ್, 78,802 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.
277 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 71 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಕೋವಿಡ್ ಆಸ್ಪತ್ರೆ ಯಲ್ಲಿ 18, ಕೋವಿಡ್ ಕೇರ್ ಸೆಂಟರ್ 3, ಹೋಂ ಐಸೋಲೇಶನ್ ನಲ್ಲಿ 52 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

error: Content is protected !!