ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

22/11/2020

ಮಡಿಕೇರಿ ನ.22 : ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ರಾದ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಂಸ್ಥೆಯ ವತಿಯಿಂದ ಶಾಲು ಹಾಕಿ ಟಿ.ಎಮ್.ಶಹೀದ್ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಮಡಿಕೇರಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಹನೀಫ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಸೂರಜ್ ಹೊಸೂರು, ತೆಕ್ಕಿಲ್ ಪ್ರತಿಷ್ಠಾನದ ಪದಾಧಿಕಾರಿಗಳಾದ ಟಿ.ಎಂ.ಜಾವೇದ್, ಟಿ.ಎಮ್.ಶಾಝ್, ಟಿ.ಎಮ್.ಶಯಾನ್ ಹಾಗೂ ಟಿ.ಎಂ.ಶೈನ್ ಮುಂತಾದವರು ಉಪಸ್ಥಿತರಿದ್ದರು.