ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 5259

November 23, 2020

ಮಡಿಕೇರಿ ನ.23 : ಜಿಲ್ಲೆಯಲ್ಲಿ ಸೋಮವಾರ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5259 ಆಗಿದ್ದು, 5109 ಮಂದಿ ಗುಣಮುಖರಾಗಿದ್ದಾರೆ. 79
ಸಕ್ರಿಯ ಪ್ರಕರಣಗಳಿದ್ದು, 71 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 76 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!