ಮಾಜಿ ಶಾಸಕ ರೋಷನ್ ಸಿಬಿಐ ವಶ

November 23, 2020

ಬೆಂಗಳೂರು ನ.23 : ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಸಂಜಯ ನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದೆ. ಐಎಂಎಯಿಂದ ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ನೂರಾರು ಕೋಟಿ ರೂಪಾಯಿಯನ್ನು ರೋಷನ್ ಬೇಗ್ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹಣವಷ್ಟೇ ಅಲ್ಲ, ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.
ಈ ಪ್ರಕರಣದಲ್ಲಿ ತಮ್ಮ ಮೇಲೆ ಆರೋಪ ಬಂದ ಕೂಡಲೇ ಕಾಂಗ್ರೆಸ್ ಪಕ್ಷ ಹಾಗೂ ಶಿವಾಜಿನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್, ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದರು. ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳುವ ಕಾರಣಕ್ಕಾಗಿಯೇ ಅವರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂಬ ಆರೋಪ ಕೂಡಾ ಕೇಳಿಬಂದಿತ್ತು.

error: Content is protected !!