ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ

23/11/2020

ಬೆಂಗಳೂರು ನ.23 : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಅನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಮುಖಂಡ ಮತ್ತು ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಹೇಳಿದ್ದಾರೆ,
ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಡಿ.5ರಂದು ಕನ್ನಡಪರ ಸಂಘಟನೆಗಳು ಕರೆನೀಡಿರುವ ಕರ್ನಾಟಕ ಬಂದ್‍ಅನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಒಕ್ಕೂಟದ ಮುಖಂಡ ಮತ್ತು ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಗೋವಿಂದ್, ಯಾವುದೇ ಕಠಿಣ ಕ್ರಮ, ಒತ್ತಡವಾದರೂ ಸರಿ ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ. ಬಂದ್ ಗೆ ಈಗಾಗಲೇ ಹಲವರು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ಜನತೆಯೂ ಬೆಂಬಲಿಸುವಂತೆ ಮನವಿ ಮಾಡಿದರು. ನಾಳೆ ಕನ್ನಡದ ಒಕ್ಕೂಟದ ವತಿಯಿಂದ ಬಳ್ಳಾರಿಯಲ್ಲಿ ಹೋರಾಟ ನಡೆಯಲಿದೆ. ಈ ಹೋರಾಟಕ್ಕೆ ಬೆಂಬಲ ನೀಡದವರು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಆ ರೀತಿ ಆಗುವುದು ಬೇಡ.ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಹೋರಾಡುವ ಪ್ರಯತ್ನ ಮಾಡುತ್ತೇವೆ ಎಂದರು.