ತೆಕ್ಕಿಲ್ ಪ್ರತಿಷ್ಠಾನದಿಂದ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಗೆ ಸನ್ಮಾನ

23/11/2020

ಮಡಿಕೇರಿ ನ. 23 : ಅರಂತೋಡು ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.
ಎ.ಎಸ್ ಪೊನ್ನಣ್ಣ ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ಭೇಟಿ ನೀಡಿದ ಸಂದರ್ಭ ಸಂಸ್ಥೆಯ ಪ್ರಮುಖರಾದ ಟಿ.ಎಮ್.ಶಹೀದ್ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಎ.ಎಸ್ ಪೊನ್ನಣ್ಣ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಸಂಪಾಜೆ ಗ್ರಾ. ಪಂ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಹನೀಫ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಸೂರಜ್ ಹೊಸೂರು, ತೆಕ್ಕಿಲ್ ಪ್ರತಿಷ್ಠಾನದ ಪದಾಧಿಕಾರಿಗಳಾದ ಟಿ.ಎಮ್ ಜಾವೇದ್, ಟಿ.ಎಮ್.ಶಾಝ್, ಟಿ.ಎಮ್.ಶಯಾನ್, ಟಿ.ಎಮ್.ಶೈನ್ ಮತ್ತಿತರರು ಇದ್ದರು.