ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

23/11/2020

ಮಡಿಕೇರಿ ನ.23 : ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂರ್ನಾಡು ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಹಾಗೂ ಚೆಯ್ಯಂಡಾಣೆ ಮಹಿಳಾ ಹೊಲಿಗೆ ತರಬೇತಿ ಕೇಂದ್ರ ಇಲ್ಲಿಗೆ 2020-21 ನೇ ಸಾಲಿಗೆ ಪ್ರವೇಶ ಕೋರಿ ಅರ್ಹ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟು ಹಾಗೂ 35 ವರ್ಷಗಳ ಒಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ ಮೀರಿಬಾರದು. ಪ್ರವರ್ಗ 1 ರ, ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳನ್ನು ಮೀರಬಾರದು. ಈ ಹಿಂದಿನ ವರ್ಷಗಳಲ್ಲಿ ಈ ಕೇಂದ್ರಗಳಲ್ಲಿ ತರಬೇತಿ ಪಡೆದುಕೊಂಡಿರುವ ಕುಟುಂಬಗಳ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ.
2020-21 ನೇ ಸಾಲಿನಲ್ಲಿ ಮೂರ್ನಾಡು ಹೊಲಿಗೆ ತರಬೇತಿ ಕೇಂದ್ರ ಹಾಗೂ ಚೆಯ್ಯಂಡಾಣೆ(ನರಿಯಂದಡ) ಇಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಮಹಿಳಾ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಮಡಿಕೇರಿ ತಾಲ್ಲೂಕು, ಡಿ.ದೇವರಾಜ ಅರಸು ಭವನ, ಮಡಿಕೇರಿ ಇವರಿಂದ ಅಥವಾ ಸಂಬಂಧಿತ ಹೊಲಿಗೆ ತರಬೇತಿ ಕೇಂದ್ರಗಳಿಂದ ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಡಿಸೆಂಬರ್, 02 ರೊಳಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿ ತಾಲ್ಲೂಕು ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ : 9448205919/ 08272-298037 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಲಿಂಗರಾಜಪ್ಪ ಅವರು ತಿಳಿಸಿದ್ದಾರೆ.