ಕೊಡಗಿನ ಅರಣ್ಯ ಇಲಾಖಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

23/11/2020

ಮಡಿಕೇರಿ ನ. 23 : ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಕರ್ನಾಟಕ ಅರಣ್ಯ ಇಲಾಖೆ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿದ ಕೊಡಗಿನ ಅರಣ್ಯ ಇಲಾಖಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಲಾಯಿತು.
ಬೆಂಗಳೂರಿನ ವಿಧಾನಸೌಧದ ಬ್ಯಾಕ್ಟೆಟ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಕೊಡಗಿನ ಉಪವಲಂiÀi ಅರಣ್ಯಾಧಿಕಾರಿಗಳಾದ ಕನ್ನಂಡ ರಂಜನ್, ಕಳ್ಳಿರ ದೇವಯ್ಯ, ವೈ,ಕೆ.ಜಗದೀಶ್, ಚರಣ ಕುಮಾರ್ ಹಾಗೂ ಅರಣ್ಯ ರಕ್ಷಕ ಚೌಡಪ್ಪನಾಯ್ಕ, ವಿ.ಜಿಡ್ಡಿ ಮನಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂವರಪ್ಪ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಿದರು.