Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:35 AM Friday 22-October 2021

ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕಾರ್ಯಾಚರಣೆ : ಮಡಿಕೇರಿಯಲ್ಲಿ ಐಜಿಪಿ ವಿಪುಲ್ ಕುಮಾರ್

23/11/2020

ಮಡಿಕೇರಿ ನ.23 : ಕಳೆದ 2-3 ತಿಂಗಳಿಂದ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ಧ ಯುದ್ದವನ್ನು ಆರಂಭಿಸಿದೆ. ಡ್ರಗ್ಸ್‍ನ ಬಳಕೆ, ಮಾರಾಟ, ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವ ಉದ್ದೇಶದಿಂದ ಈ ಯುದ್ದ ಪ್ರಾರಂಭಿಸಲಾಗಿದ್ದು, ಈ ಮಾರಕ ಜಾಲವನ್ನು ರಾಜ್ಯದಿಂದಲೇ ಕಿತ್ತು ಹಾಕಬೇಕಿದೆ. ಹೀಗಾಗಿ ಸಾರ್ವಜನಿಕರು ಇಂತಹ ಮಾದಕ ಅವ್ಯವಹಾರಗಳ ಬಗ್ಗೆ ಮಾಹಿತಿ ಇದ್ದಲ್ಲಿ, ಪೊಲೀಸ್ ಇಲಾಖೆಗೆ ನೀಡಬೇಕು ಎಂದು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ವಿಪುಲ್ ಕುಮಾರ್ ಅವರು ಮಡಿಕೇರಿಯಲ್ಲಿ ಮನವಿ ಮಾಡಿದರು.
ಮುಂದಿನ 2 ತಿಂಗಳಲ್ಲಿ ಎಲ್ಲಾ ರೀತಿಯ ತುರ್ತು ಸೇವೆಗಳಿಗೆ ಡಯಲ್ 112 ಆರಂಭವಾಗಲಿದ್ದು, ಈ ಬಗ್ಗೆಯೂ ವಾಹನ ಜಾಥಾದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಪೊಲೀಸ್, ಅಗ್ನಿ ಶಾಮಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ತುರ್ತು ಸೇವೆಗಳನ್ನು ಪಡೆಯಲು 112 ಡಯಲ್ ಆರಂಭವಾಗಿದ್ದು, ಮುಂದಿನ 2 ತಿಂಗಳ ಒಳಗಾಗಿ ಕೊಡಗು ಜಿಲ್ಲೆಯಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದರು.
::: ಕೂಂಬಿಂಗ್ ನಿರಂತರ :::
ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಎಎನ್‍ಎಫ್, ಅರಣ್ಯ ಇಲಾಖೆ ಮೂಲಕ ನಿರಂತರವಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸಮಾಜ ಘಾತುಕ ಶಕ್ತಿಗಳ ಚಟುವಟಿಕೆ ಇಲ್ಲದಿದ್ದರೂ ಕೂಡ ಅದರ ಬಗ್ಗೆ ಎಲ್ಲಾ ರೀತಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ವಿಪುಲ್ ಕುಮಾರ್ ಹೇಳಿದರು. ಭಾನುವಾರ ವಿರಾಜಪೇಟೆಗೆ ತೆರಳಿ ಅಲ್ಲಿ ಸಾರ್ವಜನಿಕರ ಸಭೆ ನಡೆಸಿ ಸಲಹೆಗಳನ್ನು ಪಡೆದಿರುವುದಾಗಿ ತಿಳಿಸಿದ ವಿಪುಲ್ ಕುಮಾರ್ ಕೊಡಗು, ಕೇರಳ, ಮೈಸೂರು ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ಸ್ವತಃ ಕೂಂಬಿಂಗ್ ನಡೆಸಿರುವುದಾಗಿ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಪೊಲೀಸ್ ಬಲದಲ್ಲಿಯೇ ಕೂಂಬಿಂಗ್ ಕಾರ್ಯಾಚರಣೆ ನಡೆಯಲಿದೆ ಎಂದು ವಿಪುಲ್ ಕುಮಾರ್ ಹೇಳಿದರು.